ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದು ಈಗಾಗಲೇ ಹೈಕಮಾಂಡ್ ಅವರನ್ನು ಭೇಟಿಯಾಗಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಅಲ್ಲದೆ ನಿನ್ನೆ ಕೇಂದ್ರ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ದಸರಾ ಆಚರಣೆಯ ವೇಳೆ ಏರ್ ಶೋ ನಡೆಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು ತಿಳಿದು ಬಂದಿದೆ. ಇದೀಗ ಸೇಮ್ ಸಿದ್ದರಾಮಯ್ಯ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರ ಜೊತೆಗೆ ರಣದೀಪ್ ಸಿಂಗ್ ಅವರು ಸಭೆ ಮಾಡಿರುವ ವಿಚಾರವಾಗಿ ನಾಯಕತ್ವ ವಿಚಾರವಾಗಿ ಅದು ಮಾಡುತ್ತಿರುವ ಸಭೆ ಅಲ್ಲ ಈಗಾಗಲೇ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ. ಏನೇ ತೀರ್ಮಾನ ಮಾಡಿದರು ಒಪ್ಪಬೇಕು ಎಂದು ಹೈಕಮಾಂಡ್ ಹೇಳಿದೆ ಸುಖಾಸುಮ್ಮನೆ ಉಹಾ ಪೋಹಗಳು ಹರಿದಾಡುತ್ತಿವೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ನಾವು ಹೇಳಿದ್ದೇವೆ ಎಂದರು.
ಸಿಎಂ ಕುರ್ಚಿ ಖಾಲಿ ಇಲ್ಲದಿದ್ದಾಗ ಆ ಕುರಿತು ಯಾಕೆ ಚರ್ಚೆ ಮಾಡುತ್ತಿದ್ದೀರಿ? ಕೆಲವು ಡಿಕೆ ಶಿವಕುಮಾರ್ ಬೆಂಬಲಿಗರು ಅಭಿಮಾನದಿಂದ ಹೇಳುತ್ತಾರೆ. ಹೈಕಮಾಂಡ್ ಏನೇ ನಿರ್ಧಾರ ಕೈಗೊಂಡರು ನಾನು ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅದಕ್ಕೆ ಬದ್ಧರಾಗಿದ್ದೇವೆ. ಸರ್ಕಾರ ಎರಡೂವರೆ ವರ್ಷ ಪೂರೈಸಿದ್ದಕ್ಕೆ ಸ್ವಾಭಾವಿಕವಾಗಿ ಚರ್ಚೆ ನಡೆದಿದೆ ಎಂದು ಸ್ಪಷ್ಟಪಡಿಸಿದರು.