ಬೆಂಗಳೂರು : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ದೂರಿನಲ್ಲಿ ಗಲಾಟೆ ಮಾಡಿದವರ ಬಂಧನ ಆಗಿದೆ. ರಾಜ್ಯದ ಕೆಲವು ಕಡೆ ಗಣೇಶ ವಿಸರ್ಜನೆ ವೇಳೆ ಕೆಲವು ಸಣ್ಣಪುಟ್ಟ ಘಟನೆಗಳಾಗಿವೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದರು.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವು ಕಡೆ ಸಣ್ಣ ಪುಟ್ಟ ಘಟನೆಯಾಗಿದೆ. ಮದ್ದೂರಿನಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಮದ್ದೂರಿನಲ್ಲಿ ಎಲ್ಲವು ನಿಯಂತ್ರಣದಲ್ಲಿದೆ. ಗಲಾಟೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದೇವೆ. ಸೂಕ್ಷ್ಮ ಪ್ರದೇಶಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಆದರೂ ಕೂಡ ಒಂದೆರಡು ಕಡೆ ಸಣ್ಣಪುಟ್ಟ ಘಟನೆಗಳಾಗಿವೆ . ಬಿಜೆಪಿಯವರು ಆರೋಪ ಮಾಡುತ್ತಾರೆ ಅವರದು ಅದೇ ಕೆಲಸವಾಗಿದೆ. ಎಂದು ಗೃಹದ ಸಚಿವ ಜಿ. ಪರಮೇಶ್ವರ ತಿಳಿಸಿದರು.