ಬೆಂಗಳೂರು : ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, 18ನೇ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಈ ಒಂದು ಕಾರ್ಯಕ್ರಮದಲ್ಲಿ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು ಬಳಿಕ ರಾಜ್ಯ ಸರ್ಕಾರ ಬೆಂಗಳೂರು ಕಮಿಷನರ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು.
ಇದೀಗ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಆದೇಶ ಹೊರಡಿಸಿದೆ. ನ್ಯಾ.ಬಿ ಕೆ ಶ್ರೀನಿವಾತ್ಸವ ಹಾಗು ನ್ಯಾ. ಸಂತೋಷ ಮೆಹ್ರಾ ಅವರಿದ್ದ ಪೀಠ ಈ ಕುರಿತು ಆದೇಶ ಹೊರಡಿಸಿದೆ. ಹಿಂದಿನ ಎಲ್ಲಾ ಭತ್ಯೆ ಮತ್ತು ಸೌಲಭ್ಯ ಒದಗಿಸಲು ಆದೇಶ ಹೊರಡಿಸಲಾಗಿದೆ. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ ಚಿನ್ನಪ್ಪ ವಾದಿಸಿದ್ದರು. ಅಮಾನತು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇದೀಗ ಆದೇಶ ಹೊರಡಿಸಿದೆ.
3 ರಿಂದ 5 ಲಕ್ಷ ಜನ ಸೇರಲು ಆರ್‌ಸಿಬಿಎ ಕಾರಣ. ಕಾರ್ಯಕ್ರಮಕ್ಕೆ ಪೊಲೀಸರ ಅನುಮತಿ ಪಡೆಯದೆ ಆರ್‌ಸಿಬಿ ಕರೆ ಕೊಟ್ಟಿದೆ. ಕಡಿಮೆ ಅವಧಿಯಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲು ಪೊಲೀಸರಿಗೆ ಸಾಧ್ಯವಿಲ್ಲ. ಆರ್‌ಸಿಬಿ ಸೃಷ್ಟಿಸಿದ ರಗಳೆಯಿಂದಾಗಿಯೇ ಜನದಟ್ಟಣೆಯಾಗಿದೆ. ಪೊಲೀಸ್ ಸಿಬ್ಬಂದಿಗಳು ಕೂಡ ಮನುಷ್ಯರೇ ಹೊರತು ಅವರೇನು ಮಂತ್ರವಾದಿಗಳಲ್ಲ ದೇವರಲ್ಲ ಅಷ್ಟು ಜನದಟ್ಟಣೆ ನಿಯಂತ್ರಿಸಲು ಪೊಲೀಸರ ಬಳಿ ಅಲ್ಲಾವುದ್ದೀನ್ ದೀಪವಿಲ್ಲ ಎಂದು ಸರ್ಕಾರಕ್ಕೆ CAT ತರಾಟೆಗೆ ತೆಗೆದುಕೊಂಡಿತು.
ಅಲ್ಲದೇ ಕಾರ್ಯಕ್ರಮ ವೇಳೆ ಸೂಕ್ತ ಸಿದ್ಧತೆ ಮಾಡಿಕೊಳ್ಳಲು ಪೊಲೀಸರಿಗೆ ಸಮಯ ನೀಡಬೇಕಿತ್ತು. ಸೂಕ್ತ ಕಾರಣಗಳಿಲ್ಲದಿದ್ದರೂ ಕೂಡ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪೊಲೀಸರು ಕಾರ್ಯಕ್ರಮ ಆಯೋಜಕರಿಗೆ ಅನುಮತಿ ನೀಡಿಲ್ಲ. ಹೀಗಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸಕುಮಾರ್ ಅಮಾನತು ರದ್ದುಗೊಳಿಸಲಾಗಿದೆ.ತಕ್ಷಣ ವಿಕಾಸ್ ಕುಮಾರರನ್ನು ಸೇವೆಗೆ ಮರು ನಿಯೋಜಿಸಬೇಕು ಎಂದು ಸಿಎಟಿ ಆದೇಶ ಹೊರಡಿಸಿದೆ.








