ಬೆಂಗಳೂರು : ಸದ್ಯಕ್ಕೆ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೂ ಮುನ್ನೆಚ್ಚರಿಕೆಯಿಂದ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ವೈದ್ಯಕೀಯ ಸಲಕರಣೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿದಂತೆ ಇತ್ಯಾದಿ ಸಲಕರಣೆಗಳನ್ನು ಸಂಗ್ರಹಿಸಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.
ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೊರೋನ ನಿಯಂತ್ರಣ ಕುರಿತು ಸಭೆ ನಡೆಯಿತು. ಸಭೆಯವಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಯಸ್ಸಾದವರು, ಗರ್ಭಿಣಿಯರು, ಹೃದ್ರೋಗ ಹಾಗು ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರತಿವಾರ ಅಥವಾ ಅಗತ್ಯವಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿ ಪರಿಶೀಲನೆ ಮಾಡಿ. ಕೋವಿಡ್ ಸೋಂಕು ಹೆಚ್ಚಳ ಬಗ್ಗೆ ಪರಿಶೀಲಿಸಿ ತೀವ್ರ ನಿಗಾ ಇಡಬೇಕು. ಗರ್ಭಿಣಿಯರಲ್ಲಿ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಕಂಡು ಬಂದರೆ, ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಕಳುಹಿಸುವುದನ್ನು ನಿಲ್ಲಿಸಿ. ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯವಸ್ತೆ ಮಾಡಿಕೊಂಡಿರಬೇಕು. ಸೀತಾ ನೆಗಡಿ ಜ್ವರವಿರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳಿಸಬಾರದು. ಶೀತ, ನೆಗಡಿ ಇರುವ ಮಕ್ಕಳನ್ನು ಶಾಲಾ ಸಿಬ್ಬಂದಿಗಳು ವಾಪಸ್ ಕಳಿಸಬೇಕು ಎಂದದು.
ಎಂತಹದ್ದೇ ಪರಿಸ್ಥಿತಿ ಎದುರಿಸಲು ಸರ್ವನ್ನದ್ಧರಾಗಿರುವಂತೆ ಸೂಚಿಸಿದ್ದು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಂತಹದ್ದೇ ಪರಿಸ್ಥಿತಿ ಎದುರಿಸಬೇಕು. ಆಸ್ಪತ್ರೆಗಳಲ್ಲಿ ಹಾಸಿಗೆ ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ ಮೂಲಸೌಕರ್ಯಗಳು ಕಡ್ಡಾಯವಾಗಿರುವಂತೆ ಕ್ರಮ ತೆಗೆದುಕೊಳ್ಳಬೇಕು. ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೋವಿಡ್ ಸಹಾಯವಾಣಿ ಆರಂಭಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದೆ.
* ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು… pic.twitter.com/iQVHt3hgne
— Siddaramaiah (@siddaramaiah) May 26, 2025