ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಮೊದಲ ಬಾರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಚರ್ಚೆ ಮಾಡಿ ಏನೂ ಪ್ರಯೋಜನವಿಲ್ಲ. ಫಲಿತಾಂಶ ಒಪ್ಪಿಕೊಳ್ಳಲೇಬೇಕು. ಏನೇ ಇದ್ರೂ ಆಮೇಲೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಮಗನ ಸೋಲಿಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು 25,413 ಮತಗಳಿಂದ ಸೋಲಿಸಿ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ 87,229 ಮತ ಪಡೆದಿದ್ದು, ಯೋಗೇಶ್ವರ್ 1,12,642 ಮತ ಪಡೆದಿದ್ದಾರೆ.