ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಸ್ತೆ ಅಭಿವೃದ್ಧಿ ಆಗಬೇಕಾದ್ರೆ ಗ್ಯಾರಂಟಿ ಬಿಡಿ ಎಂಬ ಶಾಸಕ ರಾಯರೆಡ್ಡಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮವಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳು ಎಲ್ಲಾ ಬಡವರ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕಾರ್ಯಕ್ರಮವಾಗಿದೆ. ಗ್ಯಾರಂಟಿ ಯೋಜನೆ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.