ನವದೆಹಲಿ : ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಲ್ಲಿ ಹಲವು ಬದಲಾವಣೆಗಳು ಆಗುತ್ತಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡುವ ವಿಚಾರವಾಗಿ ರೆಬೆಲ್ ಟೀಮ್ ಪ್ರತ್ಯೇಕ ಸಭೆ ನಡೆಸುತ್ತಿದ್ದರೆ, ಇನ್ನೊಂದು ಕಡೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಇದೀಗ ಇಂದು ಸಿಎಂ ಸಿದ್ದರಾಮಯ್ಯ ನವದೆಹಲಿಗೆ ತೆರಳಿದ್ದಾರೆ. ಇ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಯಾವುದೇ ಕಾರಣಕ್ಕೂ ಸಚಿವ ಸಂಪುಟ ಪುನರ್ ರಚನೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ನವದೆಹಲಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು,ಸಚಿವ ಸಂಪುಟ ಪುನರ್ ರಚನೆ ಇಲ್ಲ. ಸಂಪುಟ ವಿಸ್ತರಣೆ ಎನ್ನುವ ಪ್ರಶ್ನೆಯೇ ಇಲ್ಲ. ಇಂದು ಸಿಎಂ ಸಿದ್ದರಾಮಯ್ಯ ನವದೆಹಲಿಗೆ ಬರುತ್ತಿದ್ದಾರೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುತ್ತೇವೆ. ದಸರಾದಲ್ಲಿ ಏರ್ ಶೋ ನಡೆಸುವ ಕುರಿತು ಚರ್ಚಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.