ಬೆಳಗಾವಿ : ನವೆಂಬರ್ 1 ರ ನಿನ್ನೆ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ನಡೆದಿದ್ದು, ರಾಜ್ಯೋತ್ಸವದ ಮೆರವಣಿಗೆ ವೇಳೆ 300 ಕ್ಕೂ ಹೆಚ್ಚು ಮೊಬೈಲ್ ಗಳನ್ನು ಕಳ್ಳರು ಕಳ್ಳತನ ಮಾಡಿದ್ದಾರೆ.
ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಸುತ್ತಮುತ್ತ ನಿನ್ನೆ ಸಂಜೆ 7 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಡೆದ ಮೆರವಣಿಗೆ ವೇಳೆ 300 ಕ್ಕೂ ಹೆಚ್ಚು ಮೊಬೈಲ್ ಕಳ್ಳತನ ಮಾಡಲಾಗಿದೆ.
ಯುವಕ, ಯುವತಿಯರನ್ನು ಟಾರ್ಗೆಟ್ ಮಾಡಿ ಕಳ್ಳರ ಗ್ಯಾಂಗ್ ಕಳ್ಳತನ ಮಾಡಿದೆ. ಮೊಬೈಲ್ ಕಳೆದುಕೊಂಡವರು ಆ್ಯಪ್ ಮೂಲಕ ದೂರು ನೀಡಿದ್ದು, ಪೊಲೀಸ್ ಠಾಣೆಗೆ ಆಗಮಿಸಿ ಮೊಬೈಲ್ ಹುಡುಕಿ ಕೊಡುವಂತೆ ಮನವಿ ಮಾಡಿದ್ದಾರೆ. ಸದ್ಯ ಬೆಳಗ್ಗೆಯಿಂದ 300 ಕ್ಕೂ ಹೆಚ್ಚು ಜನರು ಬೆಳಗಾವಿಯ ಖಡೇಬಜಾರ್, ಮಾರ್ಕೆಟ್, ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಿದ್ದಾರೆ.








