ಚಿತ್ರದುರ್ಗ : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ನಿವಾಸದ ಮೇಲೆ ಇಂದು ಬೆಳ್ಳಂಬೆಳಗ್ಗೆ ಇ.ಡಿ.ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ಕೆಸಿ ವೀರೇಂದ್ರ, ಕೆಸಿ ನಾಗರಾಜು, ಕೆಸಿ ತಿಪ್ಪೇಸ್ವಾಮಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ 4 ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಸಿ ವೀರೇಂದ್ರ, ಕೆಸಿ ನಾಗರಾಜ, ಕೆಸಿ ತಿಪ್ಪೇಸ್ವಾಮಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಖಾಸಗಿ ಕಾರಿನಲ್ಲಿ ಬಂದ ಇಡಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.