ಬೆಂಗಳೂರು : ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ವೆಬ್ಸೈಟ್ನಲ್ಲಿ ಪ್ರಕಟವಾಗಿದ್ದು ಈ ಬಾರಿ ಶೇಕಡ 91.6 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗೋಷ್ಠಿ ನಡೆಸಿದರು.
2025 26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 91.6 ಮಕ್ಕಳು ತೆರಗಡೆಯಾಗಿದ್ದಾರೆ. 7,70,209 ಮಕ್ಕಳು ಪರೀಕ್ಷೆ ಬರೆದಿದ್ದರು, ಎಲ್ಲರೂ ಕೂಡ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದರು. ಇನ್ನೂ ಈ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ದ್ವಿತೀಯ ಸ್ಥಾನ ಪಡೆದಿದೆ. ಹಾಗೂ ಉತ್ತರ ಕನ್ನಡ ಜಿಲ್ಲೆ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ತೃತೀಯ ಸ್ಥಾನ ಪಡೆದಿದೆ ಎಂದು ತಿಳಿದುಬಂದಿದೆ.
ಇನ್ನು ಫಲಿತಾಂಶದಲ್ಲಿ ಕಲ್ಬುರ್ಗಿ ಜಿಲ್ಲೆಗೆ ಕೊನೆಯ ಸ್ಥಾನ ಲಭಿಸಿದೆ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮತ್ತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇನ್ನು ಗ್ರಾಮೀಣ ಭಾಗದ ಮಕ್ಕಳಿಂದ ಉತ್ತಮ ಸಾಧನೆಯಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ತಿಳಿಸಿದರು.
ಹಿಂದಿ ಸೇರಿ ತೃತೀಯ ಭಾಷೆಗೆ ಅಂಕ ಅಥವಾ ಗ್ರೇಡ್?
ಪ್ರಸಕ್ತ ವರ್ಷದಿಂದಲೇ ಹಿಂದಿ ಸೇರಿ ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡಲು ಶಿಕ್ಷಣ ಇಲಾಖೆ ಮುಂದಾಗಿತ್ತು. ಈ ಬಗ್ಗೆ ಹೈಕೋರ್ಟ್‌ನಿಂದ ತಡೆ ನೀಡಿದ್ದು, ಗ್ರೇಡ್ ಬೇಡ ಅಂಕ ನೀಡಲು ಆದೇಶಿಸಲಾಗಿತ್ತು. ಹೀಗಾಗಿ, ಈ ವರ್ಷ ಅಂಕ ನೀಡಲಾಗುತ್ತಿದೆ. 625 ಅಂಕಗಳಿಗೆ ಫಲಿತಾಂಶ ಪ್ರಕಟವಾಗಲಿದೆ. ತೃತೀಯ ಭಾಷೆ ಪಾಸ್ ಆಗುವುದ ಕಡ್ಡಾಯವಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ನಿಯಮವನ್ನು ಜಾರಿಗೆ ತರುವ ಸಾಧ್ಯತೆ ಇದೆ.








