ಮೈಸೂರು : RCB ಅಭಿಮಾನಿಗಳಿಗೆ ಇದೀಗ ಕೆಎಸ್ಸಿಎ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನಲ್ಲಿ ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ ಎಂದು ಮೈಸೂರಿನಲ್ಲಿ ಕೆ ಎಸ್ ಸಿ ಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಈ ಒಂದು ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವೆಂಕಟೇಶ್ ಪ್ರಸಾದ್ ಅವರು ಶೀಘ್ರದಲ್ಲಿಯೇ ಬೆಂಗಳೂರಲ್ಲಿ ಉದ್ಘಾಟನಾ ಪಂದ್ಯ ದಿನಾಂಕ ನಿಗದಿ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನೆ ಪಂದ್ಯ ನಡೆಯಲಿವೆ. ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ಚಾಂಪಿಯನ್ಸ್ ಆಗಿದ್ದರು. ಜನರಲ್ ಆಗಿ ಯಾರು ಗೆಲ್ಲುತ್ತಾರೋ ಅವರ ಒಂದು ಗ್ರೌಂಡ್ ನಲ್ಲಿ ಉದ್ಘಾಟನಾ ಪಂದ್ಯ ನಡೆಸಬೇಕು.
ಈ ವಿಚಾರವಾಗಿ ನಾನು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಂಕರ್ ಅವರ ಜೊತೆ ಮಾತನಾಡಿದ್ದು ಅವರು ಸಹ ಸಂಪುಟದಲ್ಲಿ ಈ ವಿಚಾರವಾಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅಂತರಾಷ್ಟ್ರೀಯ ಪಂದ್ಯಗಳು ಹಾಗೂ ಪಂದ್ಯಗಳನ್ನು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿಸುವುದು ಅಷ್ಟು ಸುಲಭದ ಕೆಲಸವಲ್ಲ ಏಕೆಂದರೆ ಕಾಲ್ತುಳಿತ ದುರಂತದಿಂದ ಪಂದ್ಯ ನಡೆದಿರಲು ನಿರ್ಧರಿಸಲಾಗಿತ್ತು. ಬೆಂಗಳೂರಿನಲ್ಲಿ ಪಂದ್ಯ ನಡೆಸಲು ಬಿಸಿಸಿಐ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.








