ಬೆಂಗಳೂರು : ದರ್ಶನ್ ಅಭಿಮಾನಿಗಳು ನನ್ನ ಮೇಲೆ ಹಲ್ಲೆಗೆ ಯತ್ನಿಸಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಇದೀಗ ನಟ ಪ್ರಥಮ್ ಅವರು ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ದೂರು ನೀಡಿದ್ದಾರೆ.
ಹೌದು ಡಿ ಫ್ಯಾನ್ಸ್ ವಿರುದ್ಧ ನಟ ಪ್ರಥಮ್ ಇದೀಗ ದೂರು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ಭೇಟಿ ನೀಡಿದ ಅವರು, ಡಿ ಗ್ಯಾಂಗ್ ವಿರುದ್ಧ ದೂರು ನೀಡಿದ್ದಾರೆ. ತಮ್ಮ ಮೇಲೆ ಹಲ್ಲೆಗೆ ಯತ್ನ ಹಾಗೂ ಕೊಲೆ ಬೆದರಿಕೆಯ ಹಿನ್ನೆಲೆಯಲ್ಲಿ ನಟ ಪ್ರಥಮ್ ದೂರು ನೀಡಿದ್ದಾರೆ. ಬೇಕರಿ ರಘು ಮತ್ತು ಗ್ಯಾಂಗ್ ವಿರುದ್ಧ ನಟ ಪ್ರಥಮ ದೂರು ನೀಡಿದ್ದಾರೆ.
ಕಳೆದ ಜುಲೈ 22 ರಂದು ದೊಡ್ಡಬಳ್ಳಾಪುರದಲ್ಲಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಬೇಕರಿ ರಘು ಮತ್ತು ಆತನ ಗ್ಯಾಂಗ್ ನಟ ಪ್ರಥಮ್ ಅವರನ್ನು ಕರೆದೊಯ್ದು, ಡ್ರ್ಯಾಗರ್ ನಿಂದ ಅಲ್ಲಿಗೆ ಯತ್ನಿಸಿದ್ದು ಅಲ್ಲದೆ ಕೊಲೆ ಬೆದರಿಕೆ ಹಾಕಿದ್ದರು ಈ ವಿಚಾರವಾಗಿ ನಟಸಂ ಇದುವರೆಗೂ ದೂರು ನೀಡಿರಲಿಲ್ಲ ಆದರೆ ಇದೀಗ ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ.