ಬೆಂಗಳೂರು : ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕೋಲಾರ ಮೂಲದ ಗಣೇಶ್, ಮುನಿರಾಜ್, ಶಿವಕುಮಾರ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಲಾಸಿಪಾಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಶೌಚಾಲಯದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು. ಬ್ಯಾಗ್ ನಲ್ಲಿ ಜಿಲೇಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಕಲಾಸಿಪಾಳ್ಯ ಠಾಣೆ ಪೋಲಿಸರಿಂದ ಆರು ತಂಡ ರಚನೆ ಮಾಡಲಾಗಿತ್ತು. ಸಿಸಿಬಿ ಇಂಟಲಿಜೆನ್ಸ್ ಎಟಿಸಿ ತಂಡದಿಂದಲೂ ಮಾಹಿತಿ ಸಂಗ್ರಹಿಸಿ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲೆಟಿನ್ ಕಡ್ಡಿ ಜೊತೆಗೆ ಡಿಟೋನೇಟರ್ ಗಳು ಕೂಡ ಪತ್ತೆಯಾಗಿತ್ತು . ಕಲಾಸಿಪಾಳ್ಯದ ಬಸ್ ನಿಲ್ದಾಣದ ಶೌಚಾಲಯದ ಬಳಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದವು. ಈ ಸಂಬಂಧ ಕಲಾಸಿಪಾಳ್ಯ ಠಾಣೆ ಪೋಲಿಸರು ಎಫ್ಐಆರ್ ದಾಖಲಿಸಿದ್ದಾರೆ.