ನವದೆಹಲಿ : ದೆಹಲಿಯ ಬೇಬಿ ಕೇರ್ ಸೆಂಟರ್ ನಲ್ಲಿ ಅಗ್ನಿದುರಂತದ ಬೆನ್ನಲ್ಲೇ ದೆಹಲಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ದೆಹಲಿಯ ಕೃಷ್ಣಾನಗರದ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕಟ್ಟಡದಲ್ಲಿದ್ದ ಮೂವರು ಸುಟ್ಟು ಕರಕಲಾಗಿದ್ದಾರೆ. ಉಳಿದ ಏಳು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದಕ್ಕೂ ಮುನ್ನ ದೆಹಲಿಯ ಬೇಬೀ ಕೇರ್ ಆಸ್ಪತ್ರೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಏಳು ನವಜಾತ ಶಿಶುಗಳು ಸಾವನ್ನಪ್ಪಿದ್ದು, ಹಲವು ಶಿಶುಗಳಿಗೆ ಗಂಭೀರ ಗಾಯವಾಗಿದೆ.