ವಿಜಯನಗರ : ರಾಜ್ಯದಲ್ಲಿ ಇಂದು ಮತ್ತೊಂದು ಘೋರ ದುರಂತ ನಡೆದಿದ್ದು, ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ನೀರು ಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಬಳಿ ಒಂದು ದುರಂತ ನಡೆದಿದೆ.
ಹೌದು ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದ ಮೂವರು ಮಕ್ಕಳು ಕೆರೆಯಲ್ಲಿ ಈಜಲು ತೆರಳಿದ್ದಾಗ ಈ ಒಂದು ಘೋರ ದುರಂತ ಸಂಭವಿಸಿದೆ. ಗ್ರಾಮದ ಸಾಗರ್ (14) ಗುರು (14) ಹಾಗೂ ವಿನಯ್ (11) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.
ದಸರಾ ರಜೆ ಹಿನ್ನೆಲೆಯಲ್ಲಿ ಮಕ್ಕಳು ಕೆರೆಯಲ್ಲಿ ಈಜಲು ಹೋಗಿದ್ದರು ಖಾನಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.