ವಿಜಯಪುರ : ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ ವಿಜಯಪುರದ ಇಂಡಿ ರಸ್ತೆಯಲ್ಲಿರುವ ತ್ಯಾಜ್ಯ ನೀರಿನ ಸಂಸ್ಕರಣ ಘಟಕದಲ್ಲಿ ಕಾಣೆಯಾಗಿದೆ ಮೂವರು ಮಕ್ಕಳು ಇದೀಗ ಶವವಾಗಿ ಪತ್ತೆಯಾಗಿದ್ದಾರೆ.
ನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ಶವಗಳು ಪತ್ತೆ ಆಗಿವೆ. ಗದಗ ಮೂಲದ ಅನುಷ್ಕಾ ಅನೀಲ ದಹಿಂಡೆ (9) ವಿಜಯ ಅನಿಳ ದಹಿಂಡೆ (7) ಮತ್ತು ವಿಜಯಪುರ ಮೂಲದ ಮಿಹಿರ್ ಶ್ರೀಕಾಂತ ಜಾನಗೌಳಿ (7) ಮೃತ ಬಾಲಕರು ಎಂದು ಹೇಳಲಾಗುತ್ತಿದೆ.
ಗದಗ ಮೂಲದ ಅನುಷ್ಕಾ ಹಾಗೂ ವಿಜಯ ಬೇಸಿಗೆ ರಜೆಗಾಗಿ ವಿಜಯಪುರದಲ್ಲಿರುವ ಮಾವನ ಮನೆಗೆ ಬಂದಿದ್ದರು. ನಿನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ವಿಜಯಪುರದ ಚಾಬಕಸಾಬ್ ದರ್ಗಾದ ಬಳಿಯ ಮನೆಯ ಮುಂದೆ ಒಂಟೆ ಸವಾರಿ ಮಾಡಿದ್ದಾರೆ. ನಂತರ ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಹೋಗಿದ್ದರು ಎಂದು ಹೇಳಲಾಗುತ್ತಿದೆ.
ಮಕ್ಕಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಟಿಟಿಸಿವಿಯಲ್ಲಿ ಸೆರೆಯಾಗಿದ್ದು, ಬಹಳ ಸಮಯವಾದರೂ ಮನೆಗೆ ಮಕ್ಕಳು ಬಾರದ ಕಾರಣ ಮನೆಯವರು ಹುಡುಕಾಡಿದ್ದಾರೆ. ಸಂಜೆ ಎಪಿಎಂಸಿ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದಾರೆ. ನಿನ್ನೆಯಿಂದಲೇ ಕುಟುಂಬಸ್ಥರು ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು. ಆದರೆ ಇಂದು ಮಧ್ಯಾಹ್ನದ ವೇಳೆ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕುಟುಂಬಸ್ಥರ ಪ್ರತಿಭಟನೆ
ಘಟನೆ ಕುರಿತಂತೆ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇದೀಗ ಯುಜಿಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಎದುರು ಮೃತ ಮಕ್ಕಳ ಪೋಷಕರಿಂದ ಪ್ರತಿಭಟನೆ ಮಾಡಿದ್ದು, ಪೊಲೀಸರೊಂದಿಗೆ ವಾಗ್ವಾದ ನಡೆದಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳ ನಿರ್ಲಕ್ಷ್ಯವೇ ಮಕ್ಕಳ ಸಾವಿಗೆ ಕಾರಣವೆಂದು ಶವಗಳನ್ನು ತೆಗೆದುಕೊಂಡು ಹೋಗಲು ಬಿಡದೇ ಗಲಾಟೆ ಮಾಡಲಾಗಿದೆ.