ನವದೆಹಲಿ : ನವದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಕಾರಿನಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಅದರಲ್ಲಿ ಓರ್ವ ಮಹಿಳಾ ಸಿಬ್ಬಂದಿ ಹಾಗೂ ಇಬ್ಬರು ಪುರುಷ ಸಿಬ್ಬಂದಿಗಳ ಶವ ಪತ್ತೆಯಾಗಿದೆ.ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಕಾರಿನಲ್ಲಿ ಪತ್ತೆಯಾದ ಶವಗಳ ಮೇಲೆ ಯಾವುದೇ ಗಾಯದ ಗುರುತುಗಳು ಇಲ್ಲ. ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಮೂವರು ಪೊಲೀಸರ ಶವ ಪತ್ತೆಯಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಪೊಲೀಸ ಸಿಬ್ಬಂದಿಗಳ ಶವಗಳನ್ನು ಸ್ಥಳಾಂತರಿಸಲಾಗಿದ್ದು, ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.








