ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಿತ್ತಾಗನಹಳ್ಳಿಯಲ್ಲಿ ನಡೆದಿದೆ.
ಹೌದು ಕಿತ್ತಾಗನಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಿತ್ತಾಕನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಅಕ್ಕ ಪಕ್ಕದ ನಾಲ್ಕೈದು ಮನೆಗಳು ಹಾಗೂ ಕೆಲವು ವಾಹನಗಳಿಗೂ ಕೂಡ ಹಾನಿಗೊಳಗಾಗಿವೆ.ಘಟನೆಯಲ್ಲಿ ಗಾಯಗೊಂಡ ಇಬ್ಬರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೂರ್ಯ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.