ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳ ಬೆಳಗ್ಗೆ ಘೋರ ದುರಂತ ಒಂದು ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರವಾದ ಗಾಯಗಳಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಾಚನಾಯಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸಿಲಿಂಡರ್ ಸ್ಫೋಟಗೊಂಡು ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಬೆಳಿಗ್ಗೆ ಎದ್ದು ಮನೆಯಲ್ಲಿ ಲೈಟ್ ಹಾಕುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ ಕಿಟಕಿ ಬಾಗಿಲು ಪೀಸ್ ಪೀಸ್ ಆಗಿವೆ. ಗಾಯಾಳುಗಳಿಗೆ ಕೂಡಲೇ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.