ಬೀದರ್ : ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವಿದ್ಯುತ್ ಕಂಬಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಪ್ರದೀಪ್ (೨೫) ವರ್ದೀಶ್ (೨೫) ಎಂದು ಗುರುತಿಸಲಾಗಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಬೀದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share.
Exit mobile version