ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊಸೂರು ಕಡೆ ತೆರಳುತ್ತಿದ್ದ XUV 700 ಹಾಗೂ ಕಿಯಾ ಕಾರಿನ ಮಧ್ಯ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
ಮೈಸೂರು ರಾಷ್ಟ್ರೀಯ ಹೆದ್ದಾರಿಯತ್ತ ತಿರುಳುತ್ತಿದ್ದ ಕಿಯಾ ಕಾರಿಗೆ XUV 700 ಕಾರು ಡಿಕ್ಕಿ ಹೊಡೆದಿದೆ. ಮಳೆಯಿಂದ ನಿಯಂತ್ರಣ ತಪ್ಪಿ ಕಿಯಾ ಕಾರಿಗೆ XUV 700 ಕಾರು ಡಿಕ್ಕಿ ಹೊಡೆದಿದೆ. ಕಿಯಾ ಕಾರು XUV 700 ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.