ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೊದಲನೇ ಅಪಘಾತ ಚಾಮರಾಜನಗರ ತಾಲೂಕಿನ ಹರದನಹಳ್ಳಿ, ಎರಡನೇ ಅಪಘಾತ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಮೊದಲನೇ ಅಪಘಾತ ಬೈಕ್ಗೆ ಈಚರ್ ವಾಹನ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದರುವ ಘಟನೆ ಚಾಮರಾಜನಗರ ತಾಲೂಕಿನ ಹರದನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಚಾಮರಾಜನಗರ ತಾಲೂಕಿನ ಬ್ಯಾಡಮೂಡ್ಲು ಗ್ರಾಮದ ಅಭಿಷೇಕ್(23) ಹಾಗೂ ಅಭಿ(21) ಎನ್ನಲಾಗಿದೆ. ಮಾದೇಶ್(21) ಎಂಬಾತನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮೈಸೂರಿಗೆ ರವಾನಿಸಲಾಗಿದೆ.
ಎರಡನೇ ಅಪಘಾತವು ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲೂಕಿನ ಹಳ್ಳದಮಾದಹಳ್ಳಿ ಗೇಟ್ ಬಳಿ ನಡೆದಿದೆ. ರಾಘವಾಪುರ ಗ್ರಾಮದ ನಾಗಶೆಟ್ಟಿ(37) ಮೃತರು ಎಂದು ತಿಳಿದುಬಂದಿದೆ.ಬೈಕ್ನಲ್ಲಿ ಬೇಗೂರು ಕಡೆ ಹೋಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಕಾರು ವಿದ್ಯುತ್ ಕಂಬಕ್ಕೆ ಗುದ್ದಿ ನಿಂತಿದೆ. ಕಾರು ಚಾಲಕ ಪರಾರಿಯಾಗಿದ್ದಾನೆ.