ರಾಮನಗರ : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಮನಗರದ ಅಚ್ಚಲು ಗ್ರಾಮದ ಬಳಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಕೆಎಸ್ ಅರ್ ಟಿಸಿ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಒಂದು ಅಪಘಾತ ರಾಮನಗರದ ಅಚ್ಚಲು ಗ್ರಾಮದ ಬಳಿ ಬೆಳ್ಳಂ ಬೆಳಗ್ಗೆ ಈ ಘಟನೆ ನಡೆದಿದೆ. ಮೃತರನ್ನು ಒಂದೇ ಕುಟುಂಬದ ತಂದೆ ಹಾಗೂ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದ್ದು,ಇನ್ನು ಅಪಘಾತದಲ್ಲಿ ಮೃತ ಮಕ್ಕಳ ತಾಯಿಯು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.. KSRTC ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಮನಗರದಿಂದ ಕನಕಪುರಕ್ಕೆ ಈ ಒಂದು ಬಸ್ ತೆರಳುತ್ತಿತ್ತು. ಕನಕಪುರದಿಂದ ರಾಮನಗರಕ್ಕೆ ತೆರಳುತ್ತಿದ್ದಾಗ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಹಿನ್ನೆಲೆಯಲ್ಲಿ ರಾಮನಗರ ಮತ್ತು ಕನಕಪುರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.