ನವದೆಹಲಿ : ದೆಹಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರವಾದಂತಹ ಕೊಲೆ ನಡೆದಿದ್ದು, ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ದೆಹಲಿಯ ನೆಬ್ ಸರಾಯ್ನಲ್ಲಿ ನಡೆದಿದೆ.
ಕೊಲೆಯಾದವರನ್ನು ರಾಜೇಶ್ (53), ಅವರ ಪತ್ನಿ ಕೋಮಲ್ (47) ಮತ್ತು ಅವರ ಮಗಳು ಕವಿತಾ (23) ಎಂದು ಗುರುತಿಸಲಾಗಿದೆ. ಇನ್ನು ಮಗ ಬೆಳಗ್ಗೆ 5 ಗಂಟೆ ಸುಮಾರಿಗೆ ಜಾಗಿಂಗ್ಗೆಂದು ಹೊರಗೆ ಹೋಗಿದ್ದ ಮನೆಗೆ ಹಿಂದಿರುಗಿದಾಗ ಹೆತ್ತವರು ಹಾಗೂ ಸಹೋದರಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾನೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ತಕ್ಷಣವೇ ಪೊಲೀಸರು ದೌಡಾಯಿಸಿ ತನಿಖೆ ಆರಂಭಿಸಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದರು. ಈ ವೇಳೆ ಮನೆಯಲ್ಲಿ ಇರುವಂತಹ ಯಾವುದೇ ವಸ್ತು ಕಳುವಾಗಿಲ್ಲ ಎಂಬುದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ.ಇಂದು ತಂದೆ-ತಾಯಿಯ ಮದುವೆ ವಾರ್ಷಿಕೋತ್ಸವವಿತ್ತು ಎಲ್ಲರೂ ಸಂತೋಷದಿಂದಿದ್ದರು ಎಂದು ಮಗ ಹೇಳಿದ್ದಾನೆ. ಮದುವೆಯ ವಾರ್ಷಿಕೋತ್ಸವ ಕೊಲೆ ನಡೆದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.