ರಾಮನಗರ : ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ದಾರುಣವಾಗಿ ಸಾವನಪ್ಪಿರುವ ಘಟನೆ ರಾಮನಗರ ತಾಲೂಕಿನ ಗ್ರಾಮದ ಬಳಿ ಈ ಒಂದು ಭೀಕರವಾದ ಅಪಘಾತ ನಡೆದಿದೆ.
ಹೌದು ಈ ಒಂದು ಅಪಘಾತ ರಾಮನಗರದ ಅಚ್ಚಲು ಗ್ರಾಮದ ಬಳಿ ಬೆಳ್ಳಂ ಬೆಳಗ್ಗೆ ಈ ಘಟನೆ ನಡೆದಿದೆ. ಮೃತರನ್ನು ಒಂದೇ ಕುಟುಂಬದ ತಂದೆ ಹಾಗೂ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದ್ದು,ಇನ್ನು ಅಪಘಾತದಲ್ಲಿ ಮೃತ ಮಕ್ಕಳ ತಾಯಿಯು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.. KSRTC ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಮನಗರದಿಂದ ಕನಕಪುರಕ್ಕೆ ಈ ಒಂದು ಬಸ್ ತೆರಳುತ್ತಿತ್ತು. ಕನಕಪುರದಿಂದ ರಾಮನಗರಕ್ಕೆ ತೆರಳುತ್ತಿದ್ದಾಗ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಹಿನ್ನೆಲೆಯಲ್ಲಿ ರಾಮನಗರ ಮತ್ತು ಕನಕಪುರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.