ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಂಬನ್ ನಲ್ಲಿ ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಬೆಂಗಾವಲು ಪಡೆಯ ಭಾಗವಾಗಿದ್ದ ಟ್ರಕ್ ಬೆಳಿಗ್ಗೆ 11.30 ರ ಸುಮಾರಿಗೆ ಬ್ಯಾಟರಿ ಚಶ್ಮಾ ಬಳಿ ಅಪಘಾತ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ. ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ಸ್ಥಳೀಯ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಅಂತ ತಿಳಿದು ಬಂದಿದೆ. 700 ಅಡಿ ಆಳದ ಕಮರಿಗೆ ವಾಹನದ ಅವಶೇಷಗಳು, ಸೈನಿಕರ ಶವಗಳು, ಅವರ ವಸ್ತುಗಳು ಮತ್ತು ಕೆಲವು ಕಾಗದಗಳು ಅಪಘಾತದ ಸ್ಥಳದ ಸುತ್ತಲೂ ಹರಡಿರುವುದನ್ನು ದೃಶ್ಯಗಳು ತೋರಿಸಿವೆ.