ಚಿಕ್ಕಮಗಳೂರು : ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ಪ್ರಿನ್ಸಿಪಾಲ್ ವೊಬ್ಬರು ತರಗತಿಯಿಂದ ಮೂವರು ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ತರಗತಿಯಿಂದ ಪ್ರಿನ್ಸಿಪಾಲ್ ಹೊರಗೆ ಹಾಕಿದ್ದು, ಬಳಿಕ ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ವಿಷಯ ತಿಳಿದ ಹಿಂದೂ ಮುಖಂಡರು ಕಾಲೇಜಿಗೆ ಆಗಮಿಸಿ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.








