ಕೋಲಾರ : ಅತಿಯಾದ ವೇಗದಿಂದ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಕೋಲಾರ ಜಿಲ್ಲೆಯ ಬಂಗಾರಪೇಟೆಯ ನಿಚ್ಚಲ್ ಸ್ಥಳದಲ್ಲೇ ಸಾವನಪ್ಪಿದ್ದಾರೆ.ಇನ್ನೂ ಅಪಘಾತದಲ್ಲಿ ಅದೃಷ್ಟವಶಾತ್ ಬಂಗಾರಪೇಟೆಯ ಸಾಯಿ ಗಗನ್ ಈ ಒಂದು ಅಪಘಾತದಿಂದ ಬಚಾವ್ ಆಗಿದ್ದಾರೆ.
ಮೃತಪಟ್ಟ ಮೂವರು ವಿದ್ಯಾರ್ಥಿಗಳನ್ನು ರೇವ ಯುನಿವರ್ಸಿಟಿಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಇದೀಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಕೋಲಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.