ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ, ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಗ್ರಾಮದ ಬಳಿ ಲಾರಿಗೆ ಕಾರಿ ಡಿಕ್ಕಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಬೆಂಗಳೂರು ಮೂಲದ ಪ್ರಣವ್ ಆಕಾಶ್, ಆದರ್ಶ್ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.