ಚಟ್ರೂ : ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚಟ್ರೂ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಆರಂಭವಾಗಿದೆ.
ಆರಂಭಿಕ ವರದಿಗಳ ಪ್ರಕಾರ, ಈ ಪ್ರದೇಶದಲ್ಲಿ ಎರಡರಿಂದ ಮೂರು ಉಗ್ರರು ಸಿಕ್ಕಿಬಿದ್ದಿದ್ದಾರೆ. ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದಿದ್ದು, ಉಗ್ರರನ್ನು ತಟಸ್ಥಗೊಳಿಸಲು ತೀವ್ರ ಕಾರ್ಯಾಚರಣೆ ನಡೆಯುತ್ತಿದೆ.
ಕಾರ್ಯಾಚರಣೆ ಮುಂದುವರೆದಿರುವುದರಿಂದ ಹೆಚ್ಚಿನ ವಿವರಗಳನ್ನ ನಿರೀಕ್ಷಿಸಲಾಗಿದೆ.