ಬೆಂಗಳೂರು : ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೂರು ವಾರಗಳ ರಾಜ್ಯ ಬಜೆಟ್ ಅಧಿವೇಶನ ನಡೆಯಲಿದೆ ಎಂದು ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಹೊರಡಿಸಿದೆ.
ವಿಧಾನಮಂಡಲದ ಅಧಿವೇಶನ ಮಾರ್ಚ್ 3 ರಿಂದ ಆರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು 3 ರಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್ 4, ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯಾಗಲಿದೆ.
ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದೆ. ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು. ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.