ಬೆಂಗಳೂರು : ಕನ್ನಡ ಭಾಷೆಯ ಬಗ್ಗೆ ತಮ್ಮ ಹೇಳಿಕೆಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ನಟ-ರಾಜಕಾರಣಿ ಕಮಲ್ ಹಾಸನ್ ತಮ್ಮ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಕರ್ನಾಟಕದಲ್ಲಿ ಸುಗಮ ಬಿಡುಗಡೆಗೆ ರಕ್ಷಣೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದು, ಪ್ರಕರಣದ ವಿಚಾರಣೆಯನ್ನು ಜೂನ್ 20ಕ್ಕೆ ಮುಂದೂಡಲಾಗಿದೆ.
ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಚಿತ್ರದ ವಿತರಣೆ ಮತ್ತು ಬಿಡುಗಡೆಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ರಾಜ್ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಸಿಇಒ ವಿ ನಾರಾಯಣ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಜೂನ್ 20 ಕ್ಕೆ ಮುಂದೂಡಲಾಗಿದೆ.
