ಚಾಮರಾಜನಗರ : ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಇದೀಗ ಮುಂದುವರೆದಿದೆ. ಬರ್ಗಿ ಬಳಿ ಜಮೀನಿನಲ್ಲಿ ಮೇಯುತಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರ್ಗಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಗ್ರಾಮದ ಜಮೀನಿನಲ್ಲಿ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಹುಲಿ ದಾಳಿಯಿಂದ ಗ್ರಾಮದ ನಿವಾಸಿಗಳು ಇದೀಗ ಕಂಗಾಲಾಗಿದ್ದಾರೆ. ವಾರದ ಹಿಂದೆಯೇ ಗ್ರಾಮದ ಮುಕ್ತಿ ಕಾಲೋನಿಯಲ್ಲಿ ಹುಲಿ ಕಾಣಿಸಿಕೊಂಡಿತ್ತು. ಪದೇ ಪದೇ ಹುಲಿ ದಾಳಿಯಿಂದ ಗ್ರಾಮಸ್ಥರು ರೋಸಿ ಹೋಗಿದ್ದಾರೆ.








