ಕೊಡಗು : ಇತ್ತೀಚಿಗೆ ಹಲವು ದಿನಗಳಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಿರತೆಯ ಕಾಟ ಇತ್ತು. ಆದರೆ ಇದೀಗ ಕೊಡಗು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾದಂತಹ ಎ.ಎಸ್ ಪೊನ್ನಣ್ಣ ನಿವಾಸದ ಬಳಿ ಹುಲಿ ಓಡಾಡಿದೆ. ಇದರಿಂದ ಸಹಜವಾಗಿ ಅಲ್ಲಿನ ಸ್ಥಳೀಯ ನಿವಾಸಿಗಳಿಗೆ ಆತಂಕ ಹೆಚ್ಚಾಗಿದೆ.
ಹೌದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ನಿವಾಸದ ಬಳಿ ಹುಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ಎ.ಎಸ್.ಪೊನ್ನಣ್ಣ ಅವರ ಮನೆಯ ಬಳಿ ಹುಲಿ ಓಡಾಟ ನಡೆಸಿದ್ದು, ಹುಲಿಯ ಹೆಜ್ಜೆ ಗುರುತುಗಳು ಸ್ಥಳದಲ್ಲಿ ಮೂಡಿವೆ.
ಹುಲಿ ಓಡಾಡಿರುವ ವಿಷಯ ತಿಳಿದು ತಲ್ಲಿನ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಕೊಡಲೇ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಗಮಿಸಿದ್ದು, ಹುಲಿಯನ್ನು ಸೇರಿ ಹಿಡಿಯಲು ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.