ಮೈಸೂರು : ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿಯ ಆತಂಕ ಮುಂದುವರೆದಿದ್ದು, ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಇದೀಗ ಹುಲಿ ಪ್ರತ್ಯಕ್ಷ ಆಗಿದೆ. ಅಲ್ಲದೇ ಇಂದು ಮಂಡಕಳ್ಳಿ ಏರ್ಪೋರ್ಟಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಬಿ ಇ ಎಂ ಎಲ್ ಬಳಿ ಹುಲಿ ಕಾಣಿಸಿಕೊಂಡಿತ್ತು. ಅದಾದ ಬಳಿಕ ಇಂದು ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡಿದ್ದು ಅದು ಅಲ್ಲದೆ ಸಿಎಂ ಸಿದ್ದರಾಮಯ್ಯ ಕೂಡ ಇಂದು ಏರ್ಪೋರ್ಟಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಹುಲಿ ಪತ್ತೆಗೆ ಮುಂದಾಗಿದ್ದಾರೆ.








