ಬೆಂಗಳೂರು : ಮೈಸೂರು ಜಿಲ್ಲೆಯ ಸರಗೂರು ತಾಲೂಕಿನಲ್ಲಿ ಪದೇ ಪದೆ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ ದಾಳಿ ಮಾಡಿ, ಅವರ ಸಾವಿಗೆ ಕಾರಣವಾಗಿದ್ದ ಈ ಹುಲಿಯನ್ನು ಸೆರೆ ಹಿಡಿದಿರುವುದಾಗಿ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಸಚಿವರು ಹೇಳಿದ್ದಾರೆ.
ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಈ ಹುಲಿಯ ಡಿಎನ್ಎ ಎರಡನ್ನೂ ಪರಿಶೀಲಿಸಿ, ಸೆರೆ ಹಿಡಿಯಲಾದ ಹುಲಿ ಹೆಡಿಯಾಲ, ಮೊಳೆಯೂರು, ನುಗು ಸುತ್ತಮುತ್ತ ಜನರ ಅಮೂಲ್ಯ ಜೀವ ಹಾನಿ ಮಾಡಿದ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.








