ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನ ಆರ್‌ಸಿಬಿ ಅಭಿಮಾನಿಗಳು ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕ್ಯಾಬಿನೆಟ್ ನಿರ್ಧರಿಸಿದೆ. ಅಲ್ಲದೇ ಆರ್ ಸಿ ಬಿ, ಕೆ ಎಸ್ ಸಿ ಎ, ಡಿಎನ್ ಎ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ಒಂದು ನಿರ್ಧಾರ ತೆಗೆದುಕೊಳ್ಳಲಾಯಿತು. ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ ತೆಗೆದುಕೊಂಡಿದ್ದು, ಆರ್‌ಸಿಬಿ ಡಿಎನ್ಎ ಕೆಎಎಸ್ಇಎ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಇದೀಗ ಸಂಪುಟ ನಿರ್ಧಾರ ತೆಗೆದುಕೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ತೆಗೆದುಕೊಳ್ಳಲಾಯಿತು.