ಬೆಂಗಳೂರು : ಸತತ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಐಪಿಎಲ್ ನಲ್ಲಿ ಕಪ್ ಬರ ನೀಗಿಸಿದ್ದು 18ನೇ ಆವೃತ್ತಿಯಲ್ಲಿ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿಹಿಡಿದಿದೆ. ಹಾಗಾಗಿ ಆರ್ಸಿಬಿ ತಂಡದ ಆಟಗಾರರಿಗೆ ಕಳೆದ ಜೂನ್ ನಾಲ್ಕರಂದು ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಈ ಒಂದು ಸಮಾರಂಭದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಈಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ತನಿಖೆ ಚುರುಕುಗೊಳಿಸಿದೆ.
ಅಲ್ಲದೇ ಇಂದು ಕಾಲ್ತುಳಿತದಲ್ಲಿ ಆರ್ಸಿಬಿಯ 11 ಅಭಿಮಾನಿಗಳು ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಘಟನೆ ಕುರಿತು ಮ್ಯಾಜಿಸ್ಟ್ರಿಯಲ್ ತನಿಖೆ ಮುಂದುವರೆದಿದ್ದು, ಇಂದು ಬೆಂಗಳೂರು ನಗರದ ಜಿಲ್ಲಾಧಿಕಾರಿ ಗಾಯಾಳುಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದ್ದಾರೆ. ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಡಿಸಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ. ಜಿಲ್ಲಾಧಿಕಾರಿ ಆಗಿರುವಂತಹ ಜಗದೀಶ್ ಅವರು ಗಾಯಾಳುಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದ್ದಾರೆ. ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಒಂದು ವಿಚಾರಣೆ ನಡೆಯಲಿದೆ.