ಬೆಂಗಳೂರು : ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆಯನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತ್ರತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ರಾಜಭವನ ರಸ್ತೆಯಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರಾಜಭವನ ಮುತ್ತಿಗೆ ಹಾಕಲು ಯತ್ನಿಸಿದ್ದ ವಾಟಳ್ ನಾಗರಾಜ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಪ್ರತಿಭಟನೆ ವೇಳೆ ಮೃತರ ಕುಟುಂಬಸ್ಥರಿಗೆ 5 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಲಾಯಿತು. ಇದೆ ವೇಳೆ ರಾಜಭವನಕ್ಕೆ ಮುತ್ತಿಗೆ ಹಾಗಲು ಹೊರಟಿದ್ದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪೊಲೀಸರು ಕರೆದೋಯ್ದಿದ್ದಾರೆ. ಕಮಿಷನರ್ ಸೇರಿ ಅಧಿಕಾರಿಗಳ ಅಮಾನತು ಹಿಂಪಡೆಯುವಂತೆ ಆಗ್ರಹಿಸಲಾಯಿತು.
ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜಭವನ ಚಲೋ ಹಮ್ಮಿಕೊಂಡಿದ್ದು ಈ ಒಂದು ರ್ಯಾಲಿ ತಡೆದು ವಾಟಾಳ್ ನಾಗರಾಜ ಸೇರಿದಂತೆ ಹಲವರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದೇ ವೇಳೆ ವ್ಯಕ್ತಿ ಒಬ್ಬ ರಾಜಭವನದ ಮುಂದೆ ಕಪ್ಪು ಬಟ್ಟೆಯನ್ನು ಪ್ರದರ್ಶಿಸಿದ್ದಾರೆ ಕಪ್ಪು ಬಟ್ಟೆ ಪ್ರದರ್ಶಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.