ಬೆಂಗಳೂರು : ಬೆಂಗಳೂರಿನಲ್ಲಿ ಮುನೇಶ್ವರ ದೇವಸ್ಥಾನದ ಅರ್ಚಕರೊಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಅರ್ಚಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಾರೋಗ್ಯದಿಂದ ಅರ್ಚಕರು ಬಳಲುತ್ತಿದ್ದು ಇದರಿಂದ ಬೇಸತ್ತು ಅಶ್ವಥ್ ನಾರಾಯಣ (54) ಆತ್ಮಹತ್ಯೆಗೆ ಶರಣಾಗಿದ್ದಾರೆ.
ನೆಲಮಂಗಲದ ನಿವಾಸಿ ಎಂದು ಹೇಳಲಾಗುತ್ತಿದ್ದು, ಅಶ್ವಥ್ ನಾರಾಯಣ್ ಫ್ಯಾಕ್ಟರಿ ಕೆಲಸ ಜೊತೆಗೆ ಮುನೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕರಾಗಿ ಕೂಡ ಸೇವೆ ಸಲ್ಲಿಸುತ್ತಿದ್ದರು. ಈ ಕುರಿತು ನೆಲಮಂಗಲ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಅಶ್ವಥ್ ನಾರಾಯಣ ಮೂರ್ತಿ ಹವನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಶವ ಶಿಫ್ಟ್ ಮಾಡಲಾಗಿದೆ.








