ಬೆಂಗಳೂರು : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದು, ಇದೀಗ ಥಾವರ್ ಚೆಂದ್ ಗೆಹ್ಲೋಟ್ ಅವರು ದೆಹಲಿಯಿಂದ ವಾಪಸ್ ಬರುತ್ತಿದ್ದಂತೆಯೇ ಅಬ್ರಾಹಂ ರಾಜ್ಯಪಾಲರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟೇ ಕೊಡುತ್ತಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಾಹಂ,ನಾನು ಹಾಕಿದ ಪ್ರಾಸಿಕ್ಯೂಷನ್ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ಕೊಟ್ಟಿದ್ದರು. ಆದ್ರೆ, 3 ಗಂಟೆ ಕ್ಯಾಬಿನೆಟ್ ಸಭೆ ನಡೆಸಿ ಗರ್ವನರ್ ನೋಟಿಸ್ ಕೊಟ್ಟಿದ್ದು ತಪ್ಪು ಅಂತಾರೆ. ಟಿ. ಜೆ ಅಬ್ರಹಾಂ ಸರಿಯಿಲ್ಲ ಅಂತಾರೆ. ಸಿದ್ದರಾಮಯ್ಯ ಮೇಲೆ ಆರೋಪ ಸರಿಯಿದೆ, ಆದರೆ ಟಿ.ಜೆ ಅಬ್ರಹಂ ಸರಿಯಲ್ಲ ಅಂತಾರೆ. ನನ್ನ ಬಳಿ ಮತ್ತಷ್ಟು ಕ್ಲಾರಿಪಿಕೇಷನ್ ಕೇಳಿದ್ರು ಎಂದರು.
ಸಾಕಷ್ಟು ವಿವರಣೆ ಕೊಟ್ಟಿದ್ದೇನೆ. ಆದಷ್ಟು ಶೀಘ್ರದಲ್ಲಿ ರಾಜ್ಯಪಾಲರು ಉತ್ತರ ಕೊಡುತ್ತಾರೆ. ಸಿದ್ದರಾಮಯ್ಯನವರಿಗೆ ರಾಜ್ಯಪಾಲರು ಎರಡನೇ ಶೋಕಾಸ್ ನೊಟೀಸ್ ಕೊಟ್ಟಿಲ್ಲ. ಇವತ್ತು ಹೆಚ್ಚುವರಿ ದಾಖಲೆ ಕೊಡಲಿಲ್ಲ. ನನ್ನ ಮೇಲೆ ಸರ್ಕಾರ ಮಾಡಿರುವ ಆಪಾದನೆಗೆ ರಾಜ್ಯಪಾಲರ ಬಳಿ ಸ್ಪಷ್ಟೀಕರಣ ಕೊಟ್ಟಿದ್ದೇನೆ.ಕಳೆದ ಬಾರಿ ಕೇಳಿದ ದಾಖಲೆಗಳ ಬಗ್ಗೆ ಮತ್ತೆ ಚರ್ಚೆ ಮಾಡಿದ್ದು, ಪ್ರಾಸಿಕ್ಯೂಷನ್ಗೆ ಕೊಟ್ಟೇ ಕೊಡುತ್ತಾರೆ ಎನ್ನುವ ವಿಶ್ವಾಸನ ನನಗೆ ಇದೆ ಎಂದು ಸ್ಫೋಟಕ ಹೇಳಿಕೆ ನೀಡಿದರು.
ಕಳೆದ ಗುರುವಾರ ರಾಜ್ಯಪಾಲರ ಸಮಯ ಕೇಳಿದ್ದೆ. ಇವತ್ತು ಬರಲು ಹೇಳಿದ್ದರು. ಹೀಗಾಗಿ ಬಂದು ಸ್ಪಷ್ಟೀಕರಣ ಕೊಟ್ಟಿದ್ದೇನೆ. ನನ್ನ ವಿರುದ್ಧ ಯಾವ ದೂರೂ ಇಲ್ಲ. ನನ್ನ ವಿರುದ್ಧ ಕೇಸ್ ಹುಡುಕಿ, ಹುಡುಕಲು ಆಗದಿದ್ರೆ ಹೇಗೆ ಹುಡುಕಬೇಕು ಎಂದು ನನ್ನ ಕೇಳಿ ಎಂದು ಸರ್ಕಾರಕ್ಕೆ ನಾನು ನೇರ ಸವಾಲ್ ಹಾಕುತ್ತೇನೆ ಎಂದು ವಾಗ್ದಾಳಿ ನಡೆಸಿದರು.