ನವದೆಹಲಿ : ಮತ ಎಣಿಕೆ ಪ್ರಕ್ರಿಯೆ ಕೇಂದ್ರ ಅಧಿಕಾರಿಗಳ ನಿಯೋಜನೆ ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನಲ್ಲಿ ಇದೀಗ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಭಾರಿ ಹಿನ್ನಡೆಯಾಗಿದೆ. ಟಿಎಂಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೀಗ ವಜಾಗೊಳಿಸಿದೆ. ಕೊಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇದೆ ವೇಳೆ ಎತ್ತಿ ಹಿಡಿದಿದೆ.
ಚುನಾವಣಾ ಆಯೋಗದ ಸುತ್ತೋಲೆ ತಪ್ಪು ಎಂದು ಹೇಳಲು ಆಗುವುದಿಲ್ಲ ಚುನಾವಣಾ ಆಯೋಗದ ನಿರ್ಧಾರ ನಿಯಮಗಳಿಗೆ ವಿರುದ್ಧವಾಗಿಲ್ಲ. ಮತ ಎಣಿಕೆ ಪ್ರಕ್ರಿಯೆಯಲ್ಲಿ ರಾಜ್ಯದ ಬದಲು ಕೇಂದ್ರ ಅಧಿಕಾರಿಗಳ ನಿಯೋಜನೆ ಮಾಡಲಾಗಿತ್ತು. ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ಎಣಿಕೆಯಿಂದ ದೂರವಿಡಲು ಪ್ರಯತ್ನಿಸಲಾಗಿತ್ತು ಎಂದು ಟಿಎಂಸಿ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸಿದರು.
ಇವರ ವಾದವನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭಾಗ್ಜಿ ಅವರು ತಳ್ಳಿ ಹಾಕಿದ್ದು ಈ ಕಾರಣಕ್ಕೆ ಚುನಾವಣಾ ಆಯೋಗವನ್ನು ದೂಷಿಸಲು ಸಾಧ್ಯವಿಲ್ಲ. ಮತ ಎಣಿಕೆಯನ್ನು ನಡೆಸಲು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ನೇಮಿಸಬಹುದು. ಈ ಬಗ್ಗೆ ನಿಯಮಗಳಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆಯೋಗದ ನಿರ್ಧಾರ ನಿಯಮಗಳಿಗೆ ವಿರುದ್ಧವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿತು.








