ಚಿಕ್ಕಮಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಾಚ್ಯ ಪದಗಳಿಂದ ನಿಂದಿಸಿ ಬೈದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಬಂಧನಕ್ಕೆ ಒಳಗಾಗಿದ್ದರು. ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಬಿಡುಗಡೆಯಾಗಿ ಚಿಕ್ಕಮಂಗಳೂರಿಗೆ ತೆರಳಿದ್ದರು. ಈ ವೇಳೆ ಎಂಎಲ್ಸಿ ಸಿಟಿ ರವಿ ಸ್ವಾಗತ ಮೆರವಣಿಗೆ ವೇಳೆ ಆಂಬುಲೆನ್ಸ್ ಬಳಕೆ ಮಾಡಿದ್ದು, 7 ಆಂಬುಲೆನ್ಸ್ ಗಳಲ್ಲಿ ಸೈರನ್, ಲೈಟ್ ಹಾಕಿ ಮೆರವಣಿಗೆ ಮಾಡಲಾಗಿದೆ ಎಂದು ಆರೋಪಿಸಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಆಂಬುಲೆನ್ಸ್ ಮಾಲೀಕ ಹಾಗೂ ಚಾಲಕರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.
ಹೌದು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆಂಬುಲೆನ್ಸ್ ಮಾಲೀಕ ಹಾಗೂ ಚಾಲಕರ ವಿರುದ್ಧ ಇದೀಗ ಸೋಮೊಟೊ ಕೇಸ್ ದಾಖಲಾಗಿದೆ. ಸಾರ್ವಜನಿಕರ ಶಾಂತಿಭಂಗ ಆರೋಪದ ಅಡಿ ಇದೀಗ ಎಫ್ಐಆರ್ ದಾಖಲಾಗಿದೆ. ಜೈಲಿನಿಂದ ಬಿಡುಗಡೆಯಾಗಿ ಎಂಎಲ್ಸಿ ಸಿಟಿ ರವಿ ಚಿಕ್ಕಮಂಗಳೂರಿಗೆ ಬಂದಿದ್ದರು.ಮೆರವಣಿಗೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಭಾಗಿಯಾಗಿದ್ದರು.