ತುಮಕೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಇಂದು ಬಸ್ ಗಳು ರಸ್ತೆಗೆ ಇಳಿಯುತ್ತಿಲ್ಲ. ಹಾಗಾಗಿ ಪ್ರಯಾಣಿಕರು ತೀವ್ರ ಪರದಾಟ ನಡೆಸಿದ್ದಾರೆ. ಈ ಹಿನ್ನೆಲೆ ಇದೀಗ ತುಮಕೂರಿಂದ ಬೆಂಗಳೂರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.
ಇಂದು ಬೆಳಿಗ್ಗೆ 9.20 ರಲ್ಲಿ ತುಮಕೂರಿನಿಂದ ಬೆಂಗಳೂರಿಗೆ ಹೊರಟಿರುವ ರೈಲು, ಬಳಿಕ ಬೆಳಿಗ್ಗೆ 11.20 ಗಂಟೆಗೆ KRS ನಿಂದ ಮತ್ತೆ ತುಮಕೂರಿಗೆ ರೈಲು ಹೋರಡಲಿದೆ. ಸಾರಿಗೆ ಮುಷ್ಕರ ಮುಗಿಯುವವರೆಗೆ ಮಾತ್ರ ವಿಶೇಷ ರೈಲಿನ ವ್ಯವಸ್ಥೆ ಕಲ್ಪಿಸಲಾಗಿದೆ.