ಕೋಲಾರ : ಕೋಲಾರ ಹಾಲು ಒಕ್ಕೂಟ ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದ್ದು, ಇಂದು ಕೋಮಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕೋಲಾರ ಹಾಲು ಒಕ್ಕೂಟದ ಕಚೇರಿಯಲ್ಲಿ ಈ ಒಂದು ಚುನಾವಣೆ ನಡೆಯಲಿದೆ.
ಶಾಸಕ ಕೆ ವೈ ನಂಜೇಗೌಡ ಅದ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗುವುದು ಖಚಿತ ಎನ್ನಲಾಗುತ್ತಿದೆ. ಮೂರನೇ ಬಾರಿಗೆ ಅಧ್ಯಕ್ಷರಾಗಿ ನಂಜೇಗೌಡ ಆಯ್ಕೆಯಾಗುವುದು ಖಚಿತ ಎಂದು ಹೇಳಲಾಗುತ್ತಿದೆ. ಎಂಟು ನಿರ್ದೇಶಕರೊಂದಿಗೆ ಕೆ.ವೈ ನಂಜೇಗೌಡ ಸದ್ಯ ರೆಸಾರ್ಟ್ ನಲ್ಲಿದ್ದಾರೆ. ಕಳೆದ ಎರಡು ಬಾರಿ ಕೂಡ ಕೆವೈ ನಂಜೇಗೌಡ ಕೋಮುಲ್ ಅಧ್ಯಕ್ಷರಾಗಿದ್ದರು. ಈ ಬಾರಿಯೂ ಕೂಡ ಅವರೇ ಅಧ್ಯಕ್ಷರಾಗುವುದು ಖಚಿತ ಎಂದು ತಿಳಿದುಬಂದಿದೆ.