ಬಳ್ಳಾರಿ : ರಾಜ್ಯದಲ್ಲಿ ಇಂದು ಒಂದೇ ದಿನ ಪ್ರತ್ಯೇಕ ಘಟನೆಗಳಲ್ಲಿ ಸಿಡಿಲು ಬಡಿದು 8 ಜನರು ಬಲಿಯಾಗಿರುವ ಘಟನೆ ವರದಿಯಾಗಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರವಿಯಲ್ಲಿ ಒಂದೇ ಕುಟುಂಬದ ಮೂವರು, ಹಾವೇರಿಯಲ್ಲಿ ಇಬ್ಬರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ಲೆಹಳ್ಳಿ ಹಾಗು ಗದಗದಲ್ಲಿ ಒಬ್ಬೊಬ್ಬರು ಸಿಡಿಲು ಬಡಿದು ಸಾವನಪ್ಪಿದ್ದಾರೆ.
ಬಳ್ಳಾರಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ರಾರವಿ ಗ್ರಾಮದಲ್ಲಿ ಸಿಡಿಲು ಬಡಿದು ಮೂವರು ಸಾವನಪ್ಪಿದ್ದಾರೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ಮೃತರನ್ನು ಬೀರಪ್ಪ (45) ಸುನಿಲ್ (26) ಮತ್ತು ವಿನೋದ್ (14) ಎಂದು ತಿಳಿದು ಬಂದಿದೆ. ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮಳೆ ಬಂದಾಗ ಮೂವರು ಮರದ ಕೆಳಗೆ ನಿಂತಿದ್ದಾರೆ. ಈ ವೇಳೆ ಭಾರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ವಿಜಯಪುರ
ಇನ್ನು ತಂಗಡಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಡಿಲು ಬಡಿದು ಮಲ್ಲಪ್ಪ ತಾಳಿಕೋಟೆ (47) ಸಾವನಪ್ಪಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮಲ್ಲಪ್ಪ ಸಾವನಪ್ಪಿದ್ದಾರೆ. ಘಟನೆ ಕುರಿತಂತೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು
ಅದೇ ರೀತಿಯಾಗಿ ಗೆದ್ಲೇಹಳ್ಳಿಯಲ್ಲಿ ಸಿಡಿಲು ಬಡಿದು ಕುರಿಗಾಹಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ದಲಹಳ್ಳಿ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಸಿಡಿಲು ಬಡಿದು ಕುರಿಗಾಹಿ ಲೊಕೇಶಪ್ಪ (65) ಸಾವನಪ್ಪಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ಹಾವೇರಿ, ಗದಗದಲ್ಲೂ ಮೂವರು ಸಾವು
ಅಲ್ಲದೇ ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ಕೂಡ ಸಿಡಿಲು ಬಡಿದು ಮೂವರು ಸಾವನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿಯ ನಾಗಪ್ಪ ಬಸವಣೆಪ್ಪ ಕಣಸೋಗಿ (65), ರಟ್ಟೀಹಳ್ಳಿ ತಾಲ್ಲೂಕಿನ ಕುಡುಪಲಿ ಸುನೀಲ್ ಕಾಳೇರ (29) ಹಾಗೂ ಗದಗ ಜಿಲ್ಲೆಯ ಬಸಾಪುರದ ಮರಿಯವ್ವ ನಾಯ್ಕರ್ (60) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.