ಶಿವಮೊಗ್ಗ : ಶಿವಮೊಗ್ಗದ ಕೋಟೆ ರಸ್ತೆಯ ಭೀಮೇಶ್ವರ ದೇಗುಲದಲ್ಲಿ ಹಿಂದೂ ಮಹಾಸಭಾ ಗಣೇಶನ ಪ್ರತಿಷ್ಠಾಪನೆ ಮಾಡಲಾಗಿದ್ದು, ಇಂದು 11ನೇ ದಿನಕ್ಕೆ ಗಣೇಶನ ವಿಸರ್ಜನೆ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆ ಹಿನ್ನಲೆಯಲ್ಲಿ ನಗರವು ಸಂಫೂರ್ಣವಾಗಿ ಕೇಸರಿಮಯವಾಗಿದೆ. ಮುಂಜಾಗ್ರತ ಕ್ರಮವಾಗಿ ಇಂದು ಶಿವಮೊಗ್ಗ ನಗರದ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು 1ನೇ ತರಗತಿಯಿಂದ ಪಿಯುಸಿವರೆಗೆ ರಜೆ ಶಿವಮೊಗ್ಗ ಬಿಇಒ ರಮೇಶ್ ಆದೇಶ ಹೊರಡಿಸಿದ್ದರೆ, ಪಿಯುಸಿ ಕಾಲೇಜುಗಳಿಗೆ ರಜೆ ನೀಡಿ ಪಿಯು ಡಿಡಿ ಚಂದ್ರಪ್ಪ ಆದೇಶಿಸಿದ್ದಾರೆ.
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಭಾರೀ ಪ್ರಸಿದ್ಧಿ ಪಡೆದುಕೊಂಡಿದ್ದು, ಪ್ರತಿ ವರ್ಷ ವಿಜೃಂಭಣೆಯಿಂದ ನಡೆಯುವ ಹಿಂದೂ ಮಹಾಸಭಾ ಗಣೇಶನ ವಿಸರ್ಜನಾ ಮೆರವಣಿಗೆ ರಾಜ್ಯದ ಗಮನ ಸೆಳೆದಿದೆ.
ನಗರದ ಕೋಟೆ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪ ನಾಯಕವೃತ್ತ, ಅಮೀರ್ ಅಹ್ಮದ್ ವೃತ್ತ, ನೆಹರು ರಸ್ತೆ, ಗೋಪಿ ವೃತ್ತ, ಎಂಆರ್ ಎಸ್ ಸರ್ಕಲ್ ಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿದೆ. ಶಿವಪ್ಪನಾಯಕ ವೃತ್ತದಲ್ಲಿ ಸಮುದ್ರ ಮಂಥನ ಸನ್ನಿವೇಶವಿದೆ. ಈ ಬಾರಿಯೂ ಸಹ ಭರ್ಜರಿಯಾಗಿ ಮೆರವಣಿಗೆ ನಡೆಯಲಿದ್ದು, ನಗರವೂ ಸಂಪೂರ್ಣವಾಗಿ ಕೇಸರಿಮಯವಾಗಿದೆ. ನಗರದಲ್ಲಿ ಪ್ರಮಖ ಸರ್ಕಲ್ ನಲ್ಲಿ ವಿವಿಧ ಪೌರಾಣಿಕ ಸನ್ನಿವೇಶಗಳು ಗಮನ ಸೆಳೆಯುತ್ತಿವೆ. ಮತ್ತೊಂದೆಡೆ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಖಾಕಿ ಫುಲ್ ಕಟ್ಟೆಚ್ಚರ ವಹಿಸಿದೆ.