ಬೆಂಗಳೂರು : ಪಕ್ಷ ಸಂಘಟನೆಯ ಸಲುವಾಗಿ ಇಂದು ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷವು ಜನರೊಂದಿಗೆ ಜನತಾದಳ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಕೇಂದ್ರ ಸಚಿವರಾದಂತಹ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಈ ಒಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಈ ಒಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ.
ಇಂದು ಜನರೊಂದಿಗೆ ಜನತಾದಳ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಕಾರ್ಯಕ್ರಮಕ್ಕೆ ಹೆಚ್ ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಅಭಿಯಾನದ ಮೂಲಕ ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. 58 ದಿನಗಳ ಕಾಲ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಮಾಡಲಿದ್ದಾರೆ. ಪಕ್ಷ ಸಂಘಟನೆಗಾಗಿ ಜನರೊಂದಿಗೆ ಜನತಾದಳ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.