ಬೆಂಗಳೂರು : ಇಂದು ಕೇಂದ್ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (UPSC) ನಡೆಯಲಿದೆ. ಹೀಗಾಗಿ, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ನಮ್ಮ ಮೆಟ್ರೋ ಸಂಚಾರ ಒಂದು ಗಂಟೆ ಮುಂಚಿತವಾಗಿ ಅಂದರೆ 6 ಗಂಟೆಗೆ ಆರಂಭವಾಗಲಿದೆ.
ಹೌದು ಇಂದು ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಲಿದೆ. ಪ್ರತಿ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಮೆಟ್ರೋ ರೈಲು ಸಂಚಾರ ಆರಂಭ ಆಗುತ್ತಿತ್ತು. ಇಂದು ಯುಪಿಎಸ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಒಂದು ಗಂಟೆ ಮುಂಚಿತವಾಗಿ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಲಿದೆ.
ನಾಲ್ಕು ಟರ್ಮಿನಲ್ ಗಳಾದ ವೈಟ್ ಫೀಲ್ಡ್, ಚಲ್ಲಘಟ್ಟ, ಮಾದಾವರ ಹಾಗೂ ರೇಷ್ಮೆ ಸಂಸ್ಥೆಯಿಂದ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲುಗಳು ಸಂಚಾರ ಆರಂಭಿಸಲಿದೆ. ನೇರಳೆ ಹಸಿರು ಎರಡು ಮಾರ್ಗದಲ್ಲೂ ಕೂಡ ಬೆಳಗ್ಗೆ 6 ಗಂಟೆಯಿಂದಲೇ ಸಂಚಾರ ಆರಂಭಿಸಲಾಗಿದೆ.