ಮಡಿಕೇರಿ : ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ. ಬಸ್‍ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನಲಾಗುತ್ತಿದೆ.
ಅಕಸ್ಮಾತ್ ಪ್ರವಾಸಿಗರಿದ್ದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಕೇರಳ ನೋಂದಣಿಯ ಖಾಸಗಿ ಬಸ್ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








